
ಮಂಗಳೂರು: ಬಿಲ್ಲವ ಮಹಾಮಂಡಲದ ಅಧ್ಯಕ್ಷರೂ ಆದ ಭಾರತ್ ಕೋ-ಆಪರೇಟಿವ್ ಬ್ಯಾಂಕ್‌ನ ಮುಖ್ಯಸ್ಥ ಸೂರ್ಯಕಾಂತ್ ಜೆ. ಸುವರ್ಣ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ ಗೌರವ ಸಮರ್ಪಣೆ ನಡೆಯಿತು.
ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಒಕ್ಕೂಟದ ಕೇಂದ್ರ ಕಚೇರಿಗೆ ಆಗಮಿಸಿದ ಸೂರ್ಯಕಾಂತ್ ಸುವರ್ಣ ಅವರನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ-ಗೌರವ ಸಮರ್ಪಿಸಿ ಹೃದ್ಪೂರ್ವಕ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಐಕಳ ಹರೀಶ್ ಶೆಟ್ಟಿ, “ಬಿಲ್ಲವ ಮಹಾಮಂಡಲದ ಅಧ್ಯಕ್ಷರಾಗಿ ಸಮಾಜಕ್ಕೆ ನೀಡುತ್ತಿರುವ ಅಪಾರ ಕೊಡುಗೆಯನ್ನು ಕಂಡು ನಾವು ಎಲ್ಲರೂ ಹೆಮ್ಮೆಪಡುತ್ತೇವೆ. ಸೂರ್ಯಕಾಂತ್ ಸುವರ್ಣ ಅವರು ಇನ್ನಷ್ಟು ಉನ್ನತ ಹುದ್ದೆಗಳಲ್ಲಿ ಸಮಾಜದ ಸೇವೆ ಸಲ್ಲಿಸಲಿ” ಎಂದು ಶುಭ ಕೋರಿದರು.
ಸಮಾರಂಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಪ್ರವೀಣ್ ಭೋಜ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.