www.gurufront.com

ಸಸಿಹಿತ್ತು ಶ್ರೀಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವದಪೂರ್ವಭಾವಿಸಭೆ

ಸಸಿಹಿತ್ಲು ಶ್ರೀಭಗವತೀ ದೇವಸ್ಥಾನದಲ್ಲಿ ಮಾ.4ರಿಂದ 8ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಪದಾಧಿಕಾರಿಗಳ ಸಭೆ ಸಮಿತಿಯ ಕಾರ್ಯಾ ಲಯದಲ್ಲಿ ಜ.20 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತಮೊಕೇಸರ ಚಂದ್ರಶೇಖರ ಬೆಲ್ವಡ ವಹಿಸಿ ಮಾತನಾಡಿ, ದೇವಸ್ಥಾನದ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲು ದಾನಿಗಳ ಸಹಕಾರ ಅಗತ್ಯ. ಕಾರ್ಯಕ್ರಮದ ಪೂರ್ವಭಾವಿಯಾಗಿ ವಿವಿಧ ಸಮಿತಿಗಳು ರಚನೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ದಾನಿಗಳ ಭಕ್ತರ ಹಾಗೂ ಸ್ವಯಂಸೇವಕರ ಶ್ರಮ ಹಾಗೂ ಸಹಕಾರದಿಂದ ವೈಭವದ ಬ್ರಹ್ಮಕಲಶ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಭೆಯಲ್ಲಿ ಸಮಿತಿಯ ಸೊಂದ ಭಾಸ್ಕರ ಭಟ್ ಅವರು ಈಗಾಗಲೇ ಕ್ಷೇತ್ರದಲ್ಲಿ ನಡೆಯುತ್ತಿರುವ ಜಪೋಪದೇಶ ಯಶಸ್ವಿಗೊಳಿಸುವಂತೆ ಕರೆ ನೀಡಿದರು.

ಕ್ಷೇತ್ರದ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಸಮಿತಿಯ ಪದಾಧಿಕಾರಿಗಳಾದ ಕಸ್ತೂರಿ ಪಂಜ, ದಿವಾಕರ ಸಾಮಾನಿ ಚೇಳಾರ್ ಗುತ್ತು, ಮುರ ಸದಾಶಿವ ಶೆಟ್ಟಿ, ಸುನಿಲ್ ಆಳ್ವ, ಗಣೇಶ್ ಹೊಸಬೆಟ್ಟು, ಗೀತಾ ಪಿ. ಕುಮಾರ್ ಸಿಕ್ಕರು.

ಬಳಿಕ ಕ್ಷೇತ್ರದ ಬ್ರಹ್ಮಕಲಶೋತ್ಸವ ವಿವಿಧ ಸಮಿತಿಯ ಪದಾಧಿಕಾರಿಗಳು ಹೊರೆ ಕಾಣಿಕೆ, ಚಪ್ಪರ, ಆಮಂತ್ರಣ ಪತ್ರಿಕೆ, ಸಮುದ್ರ ಪೂಜೆ, ಗಂಗಾರತಿ, ಅನ್ನ ಸಂತರ್ಪಣೆ ಸಮಿತಿ ಬಗ್ಗೆ ಮಾಹಿತಿ ನೀಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಂಗೇರ ವಂದಿಸಿ, ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು.

Leave a Reply

Your email address will not be published. Required fields are marked *